ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನವರು. ಅಜ್ಜಿ-ಅಪ್ಪನಿಂದ ಬಂದ ಓದು ಬರಹ ಆಸಕ್ತಿಯನ್ನು ಬಳಸಿಕೊಂಡು ಬಂದಿದ್ದಾರೆ. ರಾಜ್ಯದ ಅನೇಕ ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆಯಲ್ಲಿ ಇವರ ಲೇಖನಗಳು ಕಥೆಗಳು ಪ್ರಕಟಗೊಂಡಿವೆ. ಪ್ರಸ್ತುತ ಶೃಂಗೇರಿಯಲ್ಲಿ ನೆಲೆಸಿರುವ ಇವರು ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್. ಕೃಷ್ಣನ ಬಗ್ಗೆ ಅಪಾರ ವಲವು ಹೊಂದಿದ್ದು, ಇತ್ತೀಚಿಗೆ ಗೋಕುಲ ದಿನಗಳನ್ನು ಮರು ಸೃಷ್ಟಿಸುವ ಉದ್ದೇಶದಿಂದ ಕೃಷ್ಣ ರಾಧಯ ಕುರಿತಾದ ಕನ್ನಡದ ಹಲವು ಭಾವಗೀತೆಗಳಿಗೆ ದೃಶ್ಯಕಾವ್ಯವನ್ನು ಕಟ್ಟಿಕೊಡುವ ಹೊಸ ಪ್ರಯತ್ನವಾಗಿ ‘Tales of Parijata’ ಎಂಬ ತಮ್ಮದೇ ಯೂಟ್ಯೂಬ್ ಚಾನೆಲ್ ಕಟ್ಟಿಕೊಂಡು ಸಕ್ರಿಯರಾಗಿದ್ದಾರೆ. ಹಿಂದಿನ ನಿಲ್ದಾಣ ಇವರ ಪ್ರಥಮ ಪುಸ್ತಕ.